ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಭೀಕರ ಪರ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಘೋಷಣೆ ಮಾಡಿದ್ದ 195 ತಾಲೂಕುಗಳ ಜೊತೆಗೆ ಹೆಚ್ಚುಗರಿಯಾಗಿ 21 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ.
ರಾಜ್ಯದಲ್ಲಿ ಒಟ್ಟು 216 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಮುಂದಿನ ಆರು ತಿಂಗಳ ಕಾಲ ಬರನಿರ್ವಹಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಚಾಮರಾಜನಗರ, ಯಳಂದೂರು, ಕೃಷ್ಣರಾಜನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಹಾನಗಲ್, ಶಿಗ್ಗಾಂವಿ, ಕಲಘಟಗಿ, ಆಳ್ನಾವರ, ಆಲೂರು, ತರೀಕೆರೆ, ಹಾಸನ, ಮೂಡಿಗೆರೆ, ಪೊನ್ನಂಪೇಟೆ, ಸಿದ್ದಾಪುರ, ದಾಂಡೇಲಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.
ಮೊದಲ ಹಂತದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಸಾಧಾರಣ ಬರಪೀಡಿತ ತಾಲೂಕು ಎಂದು ವರ್ಗೀಕರಣ ಮಾಡಿದ್ದ 34 ತಾಲ್ಲೂಕುಗಳಲ್ಲಿ 22 ತಾಲೂಕುಗಳ ಮರು ಸಮೀಕ್ಷೆ ನಡೆಸಿ 11 ತಾಲೂಕು ಸಾಧಾರಣ ಬರಪೀಡಿತ, 11 ತಾಲೂಕು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.