ನವದೆಹಲಿ: 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧೆಯಲ್ಲಿದ್ದಾರೆ. ಬಹುತೇಕ ರಾಜ್ಯಗಳಲ್ಲಿ ಎನ್.ಡಿ.ಎ. ಅಧಿಕಾರದಲ್ಲಿರುವುದರಿಂದ ದ್ರೌಪದಿ ಮುರ್ಮು ಅವರ ಗೆಲುವು ಖಚಿತವಾಗಿದೆ. 10,86,431 ಲಕ್ಷ ಮತಗಳಿದ್ದು, ಅರ್ಧಕ್ಕಿಂತ ಹೆಚ್ಚು ಮತ ಪಡೆದವರು ಆಯ್ಕೆಯಾಗಲಿದ್ದಾರೆ. ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬಳಿ 6.67 ಲಕ್ಷ ಮತಗಳಿದ್ದು, ಅವರ ಗೆಲುವು ಬಹುತೇಕ ಖಚಿತವಾಗಿದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.