alex Certify ನ.20 ರಿಂದ ‘ಡ್ರಾಯಿಂಗ್ ಗ್ರೇಡ್’ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ.20 ರಿಂದ ‘ಡ್ರಾಯಿಂಗ್ ಗ್ರೇಡ್’ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿ

ಶಿವಮೊಗ್ಗ : ನ.20 ರಿಂದ 22ರವರೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆ ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಫಾಸಲೆಯವರೆಗಿನ ಪ್ರದೇಶದಲ್ಲಿ ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಭಾ.ನಾ.ಸು.ಸಂ.: -2023ರ ಕಲಂ 163ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಅದೇಶ ನೀಡಿದ್ದಾರೆ.

ಜಿಲ್ಲೆಯ ಕೆ.ಪಿ.ಎಸ್. ಶಾಲೆ- ಬಿ.ಹೆಚ್.ರಸ್ತೆ,ಶಿವಮೊಗ್ಗ, ಸ.ಪ.ಪೂ.ಕಾಲೇಜು, ಶಾಗರ, ಶ್ರೀ ತುಂಗಾಭದ್ರ ಪ್ರೌಢಶಾಲೆ, ಸೂಗೂರು, ಸ.ಪ.ಪೂ.ಕಾ-ತೀರ್ಥಹಳ್ಳಿ, ಸಂಚಿಹೊನ್ನಮ್ಮ ಸ,ಪ.ಪೂ.ಕಾ. ಹಳೆನಗರ, ಭದ್ರಾವತಿ, ಸ,ಪ.ಪೂ.ಕಾ. ಸೊರಬ ತಾ. ಈ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಳತೆಯಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ. ಟೈಪಿಂಗ್, ಜೇರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ಅವಧಿಯಲ್ಲಿ ಪ್ರತಿಬಂಧಿಸಿದೆ. ಮೊಬೈಲ್ ಬಳಕೆಯನ್ನು ನಿಷೇಧಿಸಿದೆ. ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ಪರೀಕ್ಷಾ ಕೇಂದ್ರಗಳ ಫಾಸಲೆ ಪ್ರವೇಶಿಸುವುದನ್ನು ನಿಷೇಧಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...