ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆಯ ಆಕಾಂಕ್ಷಿಗಳ ಬಹುದಿನಗಳ ಕನಸು ಈಡೇರಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಕಾರಣ ನೆನೆಗುದಿಗೆ ಬಿದ್ದಿದ್ದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಇದ್ದ ತೊಡಕುಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸಲಾಗಿದೆ.
ಕ್ಷಿಪ್ರಗತಿಯಲ್ಲಿ ದಾಖಲೆಗಳ ಪರಿಶೀಲನೆ ಸೇರಿದಂತೆ ಹಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಗೆಜೆಟ್ ರೂಪದಲ್ಲಿ ನೇಮಕಾತಿ ಆದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ಹಲವು ವರ್ಷಗಳಿಂದ ಕಾತುರದಿಂದ ಕಾಯುತ್ತಿದ್ದ ಆಕಾಂಕ್ಷಿಗಳ ಮುಖದಲ್ಲಿ ನೋಡಿದ ಸಂತೋಷ ನಿಜಕ್ಕೂ ಸಾರ್ಥಕತೆಯ ಭಾವನೆ ಮೂಡಿದೆ.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಪುಟ್ಟಣ್ಣ ಮೊದಲಾದವರಿದ್ದರು.