ಬೆಂಗಳೂರು : 23-01-2024 ರಂದು ನಡೆಯುವ ಪೊಲೀಸ್ ಉಪ ನಿರೀಕ್ಷಕರ ಹುದ್ದೆ- 2024 (PSI-2024) ಪರೀಕ್ಷೆಗೆ ವಸ್ತ್ರಸಂಹಿತೆ ಪ್ರಕಟಿಸಲಾಗಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ ನಿಯಮಗಳನ್ನು ಪಾಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ.
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
• ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು.
• ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
• ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್ಗಳು, ಪಾಕೆಟ್ಗಳು, ದೊಡ್ಡ ಬಟನ್ ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
• ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಜ್ ಗಳು ಅಥವಾ ಬಟನ್ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
• ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).
ನಿಷೇಧಿತ ವಸ್ತುಗಳ ಪಟ್ಟಿ
• ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
• ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ಗಳು, ಪೆನ್ ಡ್ರೈವ್ಗಳು, ಇಯರ್ ಫೋನ್ಗಳು, ಮೈಕ್ರೋಫೋನ್ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
• ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.
• ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.
• ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
• ತಲೆಯ ಮೇಲೆ ಟೋಪಿ/ HAT ಧರಿಸಿಬಾರದು.
• ಯಾವುದೇ ರೀತಿಯ ಮಾಸ್ಕ ಅನ್ನು ಧರಿಸುವಂತಿಲ್ಲ.ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ.
• ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು.
• ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ.
• ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.