ಚಿಕ್ಕಮಗಳೂರು: ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಮಾಡಲು ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.
ದೇವಸ್ಥಾನದ ಧರ್ಮದರ್ಶಿ ಡಾ. ಭಿಮೇಶ್ವರ ಜೋಶಿ ಅವರು ಈ ಕುರಿತಾಗಿ ಪ್ರಕಟಣೆ ಹೊರಡಿಸಿದ್ದಾರೆ.
ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಮಾಡಲು ಬರುವ ಪುರುಷರು ಶಲ್ಯ, ಪ್ಯಾಂಟ್, ಪಂಚೆ ಧರಿಸಿರಬೇಕು. ಮಹಿಳೆಯರು ಸೀರೆ, ಲಂಗ ದಾವಣಿ, ಚೂಡಿದಾರ್ ನಂತಹ ಸಾಂಪ್ರದಾಯಿಕ ಉಡುಗೆ ಧರಿಸಿಕೊಂಡು ಬರಬೇಕು.
ಇಂತಹ ಸಾಂಪ್ರದಾಯಿಕ ವಸ್ತ್ರಗಳನ್ನು ಧರಿಸಿ ಬರುವವರಿಗೆ ಮಾತ್ರ ದೇವಸ್ಥಾನದ ಒಳಗೆ ಹೋಗಿ ದೇವಿಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.