ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶಿರಸಿ ಮಾರಿಕಾಂಬ ದೇವಸ್ಥಾನದಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗುತ್ತಿದೆ. ಈ ಕುರಿತಾದ ಸೂಚನಾ ಫಲಕವನ್ನು ದೇಗುಲದ ದ್ವಾರದಲ್ಲಿ ಹಾಕಲಾಗಿದೆ. ಭಕ್ತರು ಭಾರತೀಯ ಸಂಸ್ಕೃತಿಯ ಉಡುಗೆಯನ್ನು ಕಡ್ಡಾಯವಾಗಿ ಧರಿಸತಕ್ಕದ್ದು ಎಂದು ತಿಳಿಸಲಾಗಿದೆ.
ದೇವಾಲಯಗಳಲ್ಲಿ ಪಾವಿತ್ರ್ಯ ಕಾಪಾಡಲು ಮುಜರಾಯಿ ಇಲಾಖೆ ಆದೇಶದಂತೆ ಮಾರಿಕಾಂಬ ದೇವಸ್ಥಾನದ ಧರ್ಮದರ್ಶಿ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ಮುಂದಾಗಿದೆ. ಸಾಂಪ್ರದಾಯಿಕ ಉಡುಗೆ ತೊಟ್ಟು ದೇವರ ದರ್ಶನ ಪಡೆಯಬೇಕು ಎಂಬ ಮುಜರಾಯಿ ಇಲಾಖೆ ಆದೇಶದ ಬೆನ್ನಲ್ಲೇ ರಾಜ್ಯದ ಅನೇಕ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಲಾಗುತ್ತಿದೆ. ಇದೀಗ ಶಿರಸಿ ಮಾರಿಕಾಂಬ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.