alex Certify ಕರುಳಿನ ಆರೋಗ್ಯಕ್ಕೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಪಾನೀಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರುಳಿನ ಆರೋಗ್ಯಕ್ಕೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಪಾನೀಯ

ಕರುಳು ದುರ್ಬಲವಾಗಿದ್ದರೆ ನಿಮ್ಮ ಆರೋಗ್ಯ ಕೆಡುತ್ತದೆ. ಕರುಳು ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿ ರಕ್ತಕ್ಕೆ ಸೇರಿಸುತ್ತದೆ. ಹಾಗಾಗಿ ಕರುಳಿನ ಆರೋಗ್ಯ  ಉತ್ತಮವಾಗಿರಬೇಕು. ಅದಕ್ಕಾಗಿ ನೀವು ಬೆಳಿಗ್ಗೆ ಈ ಪಾನೀಯಗಳನ್ನು ಸೇವಿಸಿ.

*ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಗೋಧಿ ಹುಲ್ಲಿನ ರಸವನ್ನು ಸೇವಿಸಿ. ಇದು ಕರುಳಿನ ಬಲವನ್ನು ಹೆಚ್ಚಿಸಿ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಜೀರ್ಣಕಾರಿ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗೇ ಇದು ಹೊಟ್ಟೆ ಊದಿಕೊಳ್ಳುವುದು, ಅನಿಲ ಸಮಸ್ಯೆ, ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆ.

*ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ ಜ್ಯೂಸ್ ಕುಡಿಯುವುದರಿಂದ ಜೀರ್ಣಕಾರಿ ಸಮಸ್ಯೆ ಶಮನಗೊಳ್ಳುತ್ತದೆ. ಕರುಳಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ದಿನದ ಆರಂಭದಲ್ಲಿ ಇದನ್ನು ಸೇವಿಸಿದರೆ ಕರುಳು ಆರೋಗ್ಯಕರವಾಗಿರುತ್ತದೆ.

*ಬೆಳಿಗ್ಗೆ ಖಾಲಿ ಹೊಟ್ಟೆಯ ಬಿಸಿ ನೀರನ್ನು ಕುಡಿಯುವುದರಿಂದ ಕರುಳಿನಲ್ಲಿರುವ ರಕ್ತನಾಳಗಳು ಹಿಗ್ಗುತ್ತದೆ. ಜೀರ್ಣಕ್ರಿಯೆಗೆ ಸಹಾಯಕವಾಗಿದೆ. ಬಿಸಿನೀರು ಕುಡಿಯುವುದರಿಂದ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ಕಾರ್ಯ ಹೆಚ್ಚಿಸಲು ಸಹಾಯ ಮಾಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...