ಪ್ರತಿದಿನ ಟೀ ಕುಡಿಯುವುದು ಆರೋಗ್ಯಕ್ಕೆ ಹಾನಿಕರ ಎನ್ನಲಾಗುತ್ತದೆ. ಆದ್ರೆ ಬೆಳಿಗ್ಗೆ ವಿಶೇಷ ಟೀ ಸೇವನೆ ಮಾಡುವುದ್ರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಆಯುರ್ವೇದದಲ್ಲಿ ಜೇಷ್ಠಮಧು ಅನೇಕ ರೋಗಗಳ ವಿರುದ್ಧ ಹೋರಾಡಲು ಪರಿಣಾಮಕಾರಿ ಎನ್ನಲಾಗುತ್ತದೆ. ಟೀಗೆ ಇದನ್ನು ಬೆರೆಸಿ ಸೇವಿಸಬಹುದು. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಇದು ಶೀತ ಮತ್ತು ಶೀತದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಗಂಟಲು ಮತ್ತು ಉಸಿರಾಟದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೇಷ್ಠಮಧು ಆಂಟಿ-ವೈರಲ್ ಮತ್ತು ಆಂಟಿ-ಆಕ್ಸಿಡೆಂಟ್ ಗಳನ್ನು ಹೊಂದಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಟೀಗೆ ಲವಂಗವನ್ನು ಸೇರಿಸಿ ಕುಡಿಯಬಹುದು. ಲವಂಗದ ಟೀ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಚಹಾದ ಸುವಾಸನೆಯನ್ನು ಹೆಚ್ಚಿಸುತ್ತದೆ. ಇದು ಆಂಟಿ-ವೈರಲ್ ಮತ್ತು ಆಂಟಿ-ಆಕ್ಸಿಡೆಂಟ್‌ಗಳಿಂದ ಕೂಡಿದೆ. ಇದಲ್ಲದೆ ನೀವು ಟೀಗೆ ಶುಂಠಿ, ಜೇನುತುಪ್ಪ ಅಥವಾ ಬೆಲ್ಲವನ್ನು ಸೇರಿಸಿ ಕುಡಿಯಬಹುದು.