
ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್(ಶಾಖದ ಹೊಡೆತ) ಹೀಟ್ ವೇವ್ ಸೊಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುಲು ಹವಾಮಾನ ಇಲಾಖೆ(KSNDMC) ಈ ಕೆಳಕಂಡ ಸಲಹೆಗಳನ್ನು ನೀಡಿದೆ.
ಹೀಟ್ ವೇವ್‌ಗೆ ಸಲಹೆಗಳು
ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.
ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸಿ.
ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.
ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ.
ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.
ನೀವು ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ
ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.
ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ತೋರಣೆ(ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ.
ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.
ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ತಣ್ಣೀರಿನಲ್ಲಿ ಸ್ನಾನ ಮಾಡಿ.
ಸನ್‌ಸ್ಪೆಕ್‌ನಿಂದ ಪೀಡಿತ ವ್ಯಕ್ತಿಯ ಚಿಕಿತ್ಸೆಗಾಗಿ ಸಲಹೆಗಳು:
ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕಳಗೆ ಇರಿಸಿ. ಅವರನ್ನು ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ.
ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ರೋಗಿಗೆ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಅಗತ್ಯವಿರುತ್ತದೆ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.
ಸಾರ್ವಜನಿಕರು ತಂಪಾದ ವಾತಾವರಣದಿಂದ ಬಿಸಿ ವಾತಾವರಣಕ್ಕೆ ಬಂದವರ ದೇಹವು ಶಾಖಕ್ಕೆ ಒಗ್ಗಿಕೊಳ್ಳುವವರೆಗೆ ಅವರು ಒಂದು ವಾರದವರೆಗೆ ತೆರೆದ ಮೈದಾನದಲ್ಲಿ ಚಲಿಸಬಾರದು ಮತ್ತು ಸಾಕಷ್ಟು ನೀರು ಕುಡಿಯಬೇಕು. ಶಾಖ ತರಂಗದ ಸಮಯದಲ್ಲಿ ಬಿಸಿ ವಾತಾವರಣಕ್ಕೆ ಕ್ರಮೇಣ ಒಡ್ಡಿಕೊಳ್ಳುವುದರಿಂದ ಒಗ್ಗಿಕೊಳ್ಳುವಿಕೆಯನ್ನು ಸಾಧಿಸಲಾಗುತ್ತದೆ.
ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಪ್ರಯಾಣಿಕರು ಪ್ರಯಾಣಿಸುವಾಗ, ನಿಮ್ಮೊಂದಿಗೆ ನೀರನ್ನು ಒಯ್ದಿರಿ.
ಬಿಸಿಲಿನಲ್ಲಿ ತಲೆ ಹಾಗೂ ದೇಹವನ್ನು ಸೂರ್ಯನ ಕಿರಣಗಳಿಗೆ ಒಡ್ಡದಿರಿ, ಹಗುರವಾದ, ತಿಳಿ ಬಣ್ಣದ ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಿ, ಟೋಪಿ ಅಥವಾ ಕೊಡೆ/ಛತ್ರಿ ಬಳಸಿ.
ಒಂದು ವೇಳೆ ಹೊರಗೆ ಬಿಸಿಲಿನಿಂದ ಮನೆಗೆ ಬಂದ ತಕ್ಷಣ ಕೂಡಲೇ ಅತಿ ತಂಪಾದ ನೀರು ಕುಡಿಯಬಾರದು ಅಥವಾ ಎ.ಸಿ/ಕೋಲರ್ ಗಳನ್ನು ಕೋಡಲೇ ಬಳಸುವುದು ಸೂಕ್ತವಲ್ಲ.
ಸಾಧ್ಯವಾದಷ್ಟು ತಂಪಾದ ಸ್ಥಳಗಳ ಇರಿ
ನೇರ ಬಿಸಿಲು/ಬಿಸಿಗಾಳಿಗೆ ಒಡ್ಡಿಕೊಳ್ಳಬೇಡಿ
ಬಿಸಿಲಿನ ಅವಧಿಯಲ್ಲಿ ಕೊಡೆಗಳನ್ನು ಬಳಸಿ
ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ
ಸಾಧ್ಯವಾದಷ್ಟು ಹತ್ತಿಯ ಉಡುವುಗಳನ್ನು ಧರಿಸಿ
ಕಪ್ಪು /ಘಾಡ ಬಣ್ಯದ ತೆಳುವಾದ ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ
ಜಯ ಟೀ.ಅದಿಗಳನ್ನು ಬಳ್ಳ
ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡಬೇಡಿ
ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಿರಿ
ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ
ಸಾಕಷ್ಟು ನೀರು ಮಜ್ಜಿಗೆ ಕುಡಿಯಿರಿ
ಬಿಸಿ ಚಹ, ಮದ್ಯ ಸೇವಿಸಬೇಡಿ
ವಾಸವಿರುವ ಕೋಣಿಯನ್ನು ತಂಪಾಗಿರಿಸಿ
ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು
ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಿ
ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬೇಡಿ
ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಕೂಡಲೇ ಚಿಕಿತ್ಸೆ
ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದನ್ನು ತಡಮಾಡಬೇಡಿ
ಬಿಸಿಗಾಳಿ ತುತ್ತಾದವರಿಗೆ ಸಾಕಷ್ಟು ಕುಡಿಯುವ ನೀರು, ಮಜ್ಜಿಗೆ, ದ್ರವಹಾರ ನೀಡಿ
ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಸೇವಿಸಬೇಡಿ