ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದ ಅನೇಕ ದೇಶಗಳಲ್ಲಿ ಜನರು ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಚಹಾ ಕುಡಿಯುವ ಅಭ್ಯಾಸ ಹೊಂದಿದ್ದಾರೆ. ಇದನ್ನು ಬೆಡ್ ಟೀ ಎಂದು ಕೂಡ ಕರೆಯಲಾಗುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಅಪಾಯಕಾರಿ. ಆಹಾರ ತಜ್ಞರ ಪ್ರಕಾರ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸುವುದರಿಂದ ಆರೋಗ್ಯಕ್ಕೆ ಬಹಳ ಹಾನಿಯಾಗುತ್ತದೆ.
ಹೊಟ್ಟೆಯ ಸಮಸ್ಯೆಗಳು
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ಹೊಟ್ಟೆಯ ಸಮಸ್ಯೆಗಳು ಉಂಟಾಗಬಹುದು. ಚಹಾದಲ್ಲಿರುವ ಕೆಫೀನ್ ಹೊಟ್ಟೆಯ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ, ಜೊತೆಗೆ ಅಸಿಡಿಟಿಯನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಅಜೀರ್ಣ, ಮಲಬದ್ಧತೆ ಮತ್ತು ಹೊಟ್ಟೆ ನೋವು ಬರುವ ಸಾಧ್ಯತೆ ಇರುತ್ತದೆ.
ಪೌಷ್ಟಿಕಾಂಶದ ಕೊರತೆ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹಕ್ಕೆ ಬೇಕಾದ ಪೌಷ್ಟಿಕಾಂಶದ ಸೇವನೆ ಕಡಿಮೆಯಾಗಬಹುದು. ಚಹಾದಲ್ಲಿರುವ ಕೆಫೀನ್ ನಮ್ಮ ಹಸಿವನ್ನು ನಿಗ್ರಹಿಸುತ್ತದೆ, ಇದು ಪೋಷಕಾಂಶಗಳ ಸಮತೋಲನದ ಮೇಲೆ ಪರಿಣಾಮ ಬೀರುತ್ತದೆ.
ಹೃದಯ ಸಂಬಂಧಿ ಸಮಸ್ಯೆಗಳು
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಚಹಾದಲ್ಲಿರುವ ಕೆಫೀನ್‌ನಿಂದಾಗಿ ಅಧಿಕ ರಕ್ತದೊತ್ತಡದ ಸಮಸ್ಯೆ ಬರಬಹುದು. ಇದು ಹೃದಯಾಘಾತದಂತಹ ಅಪಾಯಕಾರಿ ಕಾಯಿಲೆಗಳಿಗೆ ಪ್ರಮುಖ ಕಾರಣವಾಗಿದೆ.
ನಿರ್ಜಲೀಕರಣ (ಡಿಹೈಡ್ರೇಶನ್)
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಡಿಹೈಡ್ರೇಶನ್‌ಗೆ ಕಾರಣವಾಗಬಹುದು. ಚಹಾ ಕುಡಿಯುವುದರಿಂದ ಮೂತ್ರ ವಿಸರ್ಜನೆ ಹೆಚ್ಚುತ್ತದೆ. ಇದರಿಂದಾಗಿ ನಿರ್ಜಲೀಕರಣ ಉಂಟಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಮಾಡಬಾರದು, ಅಷ್ಟೇ ಅಲ್ಲ ಅದರ ಪ್ರಮಾಣವನ್ನು ಕೂಡ ಮಿತಿಗೊಳಿಸಿ.
ನಿದ್ರೆಯ ಕೊರತೆ
ಚಹಾ ನಮ್ಮ ನರಮಂಡಲದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದು ಮೈಗ್ರೇನ್ ಸೇರಿದಂತೆ ನಿದ್ರೆಯ ಕೊರತೆಗೆ ಕಾರಣವಾಗುತ್ತದೆ. ಇದು ಮೊದಲ 8 ಗಂಟೆಗಳ ಶಾಂತ ನಿದ್ರೆಯನ್ನು ತಡೆಯುತ್ತದೆ. ನಿದ್ರಾಹೀನತೆಯ ಸಮಸ್ಯೆ ಇರುವವರು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯಬಾರದು.