ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು ಎಂದುವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಮಹಾನಗರಕ್ಕೆ ಕಾವೇರಿಯಿಂದ ಬಳಕೆ ಮಾಡಿಕೊಳ್ಳಲು ಅಗತ್ಯ ನೀರು ಕಾಯ್ದಿರಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಜಯನಗರದಲ್ಲಿರುವ ಕೊಳಚೆ ಪ್ರದೇಶದಲ್ಲಿ ಉಂಟಾದ ನೀರಿನ ಸಮಸ್ಯೆ ಕುರಿತು ಸದನದಲ್ಲಿ ಪ್ರಶ್ನೆ ಎತ್ತಿದರು .
ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆಶಿ 2017ರಿಂದ ಈ ಸ್ಲಂಗೆ ಉಚಿತವಾಗಿ ನೀರು ಪೂರೈಸಲಾಗುತ್ತಿದೆ. ಜಯನಗರದಲ್ಲಿ ನಿರ್ಮಾಣವಾಗಿರುವ ಫ್ಲಾಟ್ಗಳಿಗೆ ಬೋರ್ ವೆಲ್ನಿಂದ ನೀರು ಪೂರೈಸಲಾಗುತ್ತಿದೆ ಎಂದರು. ಕಾವೇರಿಯಿಂದ ಆರು ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ. ಶಾಸಕರ ಪ್ರದೇಶಾಭಿವೃದ್ಧಿಗೆ ಐದು ಕೋಟಿ ರೂಪಾಯಿಗಳನ್ನು ನೀಡುತ್ತೇನೆ. ಅದನ್ನು ಖರ್ಚು ಮಾಡಿ ಜಯನಗರ ಸ್ಲಂಗೆ ಉಚಿತ ನೀರಿನ ಸಂಪರ್ಕ ಕಲ್ಪಿಸಿ ಎಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.