ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ತೊಂಡಾಳು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗ ಕೊಯ್ದುಕೊಂಡಿದ್ದಾನೆ.
ಶುಕ್ರವಾರ ರಾತ್ರಿ ಕಂಠ ಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿ ಮದ್ಯದ ಅಮಲಿನಲ್ಲಿ ಹೀಗೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮರ್ಮಾಂಗ ಕೊಯ್ದುಕೊಂಡು ಕೂಗಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.