ಬೆಳಗಾವಿ: ಹೆದ್ದಾರಿ ಗತ್ತು ವಾಹನದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮದ್ಯಪಾನ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಡಕಲಾಟ ವ್ಯಾಪ್ತಿಯ ಕಾನ್ ಸ್ಟೇಬಲ್ ವಿಲಾಸ್ ದುಪಾಳ, ಡಿಆರ್ ಸಿಬ್ಬಂದಿ ಮಲ್ಲಿಕಾರ್ಜುನ ಕಮತೆ ಅಮಾನತುಗೊಂಡ ಪೊಲೀಸ್ ಕಾನ್ಸ್ಟೇಬಲ್ ಗಳಾಗಿದ್ದಾರೆ.
ಇವರು ಬುಧವಾರ ರಾತ್ರಿ ಹೈವೇ ಗಸ್ತು ಕರ್ತವ್ಯದಲ್ಲಿದ್ದಾಗ ವಾಹನದಲ್ಲೇ ಮದ್ಯಸೇವನೆ ಮಾಡುತ್ತಿದ್ದರು. ಿದನ್ನು ಗಮನಿಸಿದ ಸ್ಥಳೀಯರು ವಿಡಿಯೋ ಸಮೇತ ಮಾಹಿತಿ ನೀಡಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಭೀಮಾಶಂಕರ ಗುಳೇದ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.