ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಮಸಳ್ಳಿ ಗ್ರಾಮದಲ್ಲಿ ವಿದ್ಯುತ್ ವಿತರಣಾ ಕಚೇರಿ ಆವರಣದಲ್ಲಿ ಎಸ್ಕಾಂ ಜೆಇ ಮದ್ಯ ಸೇವಿಸಿದ ಆರೋಪ ಕೇಳಿ ಬಂದಿದೆ.
ಎಸ್ಕಾಂ ಜೆಇ ಆಗಿ ಕಾರ್ಯನಿರ್ವಹಿಸುತ್ತಿರುವ ಗೊಲ್ಲಾಳಪ್ಪ ಅವರು ಕಚೇರಿ ಆವರಣದಲ್ಲಿ ಮದ್ಯಪಾನ ಮಾಡುತ್ತ ಕುಳಿತಿದ್ದ ಸಂದರ್ಭದಲ್ಲಿ ಸಾರ್ವಜನಿಕರು ನೋಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಾನು ಮದ್ಯ ಸೇವನೆ ಮಾಡಿಲ್ಲ ಎಂದು ಗೊಲ್ಲಾಳಪ್ಪ ವಾದಿಸಿದ್ದಾರೆ. ಅವರು ಮದ್ಯಪಾನ ಮಾಡಿದ ವಿಡಿಯೋ ಮಾಡಿದ ಸಾರ್ವಜನಿಕರು ಜಾಲತಾಣದಲ್ಲಿ ಹರಿಬಿಟ್ಟಿದ್ದು, ಗೊಲ್ಲಾಳಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.