ಬೆಳಗಾವಿ: ಹನಿ ನೀರಾವರಿ ಅಳವಡಿಸಿಕೊಳ್ಳುವ ಎಲ್ಲಾ ವರ್ಗದ ರೈತರಿಗೆ ಶೇಕಡ 90 ರಷ್ಟು ಸಹಾಯಧನ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರೈತ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಹನಿ ನೀರಾವರಿಗೆ ಶೇಕಡ 90 ರಷ್ಟು ಸಹಾಯಧನ ನೀಡುವ ನಿಟ್ಟಿನಲ್ಲಿ ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಕೊರೋನಾ ಕಾರಣದಿಂದ ಎಲ್ಲಾ ವರ್ಗದ ರೈತರಿಗೆ ಸಹಾಯಧನ ಕೊಡಲಾಗಿರಲಿಲ್ಲ. ಇದರಿಂದ ರೈತರಿಗೆ ತೊಂದರೆ ಆಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಹನಿ ನೀರಾವರಿಗೆ ಎಲ್ಲ ವರ್ಗದ ರೈತರಿಗೆ ಶೇಕಡ 90ರಷ್ಟು ಸಹಾಯಧನವನ್ನು ಎರಡು ಎಕರೆವರೆಗೂ ನೀಡಲಾಗುವುದು ಎಂದು ತಿಳಿಸಿದ್ದಾರೆ.