alex Certify ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರು: ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಪುಡಿ ರೌಡಿಗಳು ಲಾಂಗ್ ಬೀಸಿ ಗಾಯಗೊಳಿಸಿದ ಘಟನೆ ಕುಮಾರಸ್ವಾಮಿ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಧ್ಯರಾತ್ರಿ 12:30 ರ ಸುಮಾರಿಗೆ ಕುಡಿದ ಮತ್ತಿನಲ್ಲಿದ್ದ ಪುಂಡರು ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ ಎಂದು ಹೇಳಿದ ಬಿಎಂಟಿಸಿ ಚಾಲಕ ನಾಗೇಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಏಪ್ರಿಲ್ 4ರಂದು ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿದ ಚಾಲಕ ನಾಗೇಂದ್ರ ತಡರಾತ್ರಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿಕೊಂಡು ಮಲಗಿದ್ದಾರೆ. ಕಂಡಕ್ಟರ್ ಕೂಡ ಬಸ್ ನಲ್ಲಿ ಮಲಗಿದ್ದರು. ಅಲ್ಲಿಗೆ ಬಂದ ಅಪರಿಚಿತರು ಜೋರಾಗಿ ಕೂಗಾಡಿ ಗಲಾಟೆ ಮಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ಕೂಗಾಡದಂತೆ ಹೇಳಿದ್ದಕ್ಕೆ ಚಾಲಕ ನಾಗೇಂದ್ರ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಗೊಂಡ ನಾಗೇಂದ್ರ ನಿರ್ವಾಹಕನ ಸಹಾಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...