alex Certify SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಚಾಲಕ ಸುರೇಶ್ ಮೇಲೆ ಬ್ಲೇಡ್ ನಿಂದ ದುಷ್ಕರ್ಮಿ ಹಲ್ಲೆ ಮಾಡಿದ್ದಾನೆ. ಬಸ್ ನಿಲ್ದಾಣ ಪ್ರವೇಶಿಸುವಾಗ ಹಾರ್ನ್ ಮಾಡಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಮುಂಬೈ –ಅಫಜಲಪುರ ಮಾರ್ಗದ ಕೆಕೆಆರ್ಟಿಸಿ ಬಸ್ ಚಾಲಕ ಸುರೇಶ್ ಗಾಯಗೊಂಡಿದ್ದು, ಅವರನ್ನು ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...