ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವಾಹನ ಚಾಲಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಯ ಸ್ನಾನದ ದೃಶ್ಯಗಳನ್ನು ಸೆರೆಹಿಡಿದು 5 ಲಕ್ಷ ರೂ. ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾನೆ. ಮಹಿಳಾ ಪೊಲೀಸ್ ಅಧಿಕಾರಿ ಭೋಪಾಲ್ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಪರಾರಿಯಾಗಿದ್ದಾನೆ.
ಭೋಪಾಲ್ ಕ್ರೈಂ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಯನ್ನು ಭೂಪೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿ ವಾಹನ ಚಾಲಕನಾಗಿದ್ದ ಆರೋಪಿ ಆಕೆಯ ಸ್ನಾನದ ದೃಶ್ಯಗಳನ್ನು ಸೆರೆಹಿಡಿದು 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಮಹಿಳಾ ಪೊಲೀಸ್ ಅಧಿಕಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮಾಹಿತಿ ನೀಡಿ, ಅವರ ಸಲಹೆಯಂತೆ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.