ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಕೆಎಸ್ಆರ್ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಚಾಲಕ ಸುರಕ್ಷಿತವಾಗಿ ಬಸ್ ಅನ್ನು ಹಳ್ಳಕ್ಕೆ ಇಳಿಸಿದ್ದಾರೆ.
ಬಸ್ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ದಾಬಸ್ ಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 30 ಜನರು ಸುರಕ್ಷಿತವಾಗಿದ್ದಾರೆ. ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.