
ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೀಪ್ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿಕುಮಾರ್(34) ಮೃತಪಟ್ಟ ಚಾಲಕ. ನಾಲ್ಕು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರವಿಕುಮಾರ್ ಭಾನುವಾರ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರ ಬಂದಿದ್ದಾರೆ.
ನಂತರ ಅವರು ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿಕುಮಾರ್ ಕೇರಳ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು, ಪತ್ನಿ ಕಳೆದ ವಾರವಷ್ಟೇ ತವರಿಗೆ ಹೋಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.