alex Certify ಚಾಲಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ

ಬೆಂಗಳೂರು: ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು, ಚಾಲಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆಯಲಾಗಿದೆ. ಚಾಲಕರ ಮಕ್ಕಳ ಶಿಕ್ಷಣಕ್ಕೆ ಈ ಬಾರಿ 17 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

ಚಾಲಕರಿಗೆ 10,000 ರೂ. ಮಾಸಿಕ ಪರಿಹಾರ ಕೇಳಿದ್ದು, ಅದನ್ನು ನೀಡಲು 4,370 ಕೋಟಿ ರೂಪಾಯಿ ಬೇಕಾಗುತ್ತದೆ. ಅಲ್ಲದೇ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ ಬಂದಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...