ಬೆಂಗಳೂರು: ಪೌರ ಕಾರ್ಮಿಕರ ಜೊತೆಗಿರುವ ಚಾಲಕರು ಮತ್ತು ಲೋಡರ್ ಗಳ ಹುದ್ದೆಯನ್ನು ಕಾಯಂಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಪೌರ ಕಾರ್ಮಿಕರನ್ನು ಕಾಯಂ ಮಾಡಿದಂತೆ ಅವರೊಂದಿಗೆ ಕಾರ್ಯನಿರ್ವಹಿಸುತ್ತಿರುವ ಲೋಡರ್ ಗಳು ಮತ್ತು ಚಾಲಕರನ್ನು ಕೂಡ ಕಾಯಂ ಮಾಡಲು ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಸುಮಾರು 1000 ಚಾಲಕರು ಮತ್ತು ಲೋಡರ್ ಗಳು ಇರಬಹುದೆಂದು ಅಂದಾಜಿಸಲಾಗಿದೆ. ಪೌರಕಾರ್ಮಿಕರನ್ನು ಕಾಯಂ ಮಾಡಿದಂತೆ ಅವರೊಂದಿಗೆ ಕಾರ್ಯನಿರ್ವಹಿಸುವ ಚಾಲಕರು, ಲೋಡರ್ ಗಳನ್ನು ಕೂಡ ಕಾಯಂ ಮಾಡಲಾಗುವುದು ಎಂದು ಹೇಳಲಾಗಿದೆ.