alex Certify ಹುದ್ದೆ ಕಾಯಂ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ – ಪೌರ ಕಾರ್ಮಿಕರ ರೀತಿಯಲ್ಲೇ ಚಾಲಕರು, ಲೋಡರ್ ಗಳ ಹುದ್ದೆ ಕಾಯಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುದ್ದೆ ಕಾಯಂ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ – ಪೌರ ಕಾರ್ಮಿಕರ ರೀತಿಯಲ್ಲೇ ಚಾಲಕರು, ಲೋಡರ್ ಗಳ ಹುದ್ದೆ ಕಾಯಂ

ಬೆಂಗಳೂರು: ಪೌರ ಕಾರ್ಮಿಕರ ಜೊತೆಗಿರುವ ಚಾಲಕರು ಮತ್ತು ಲೋಡರ್ ಗಳ ಹುದ್ದೆಯನ್ನು ಕಾಯಂಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಪೌರ ಕಾರ್ಮಿಕರನ್ನು ಕಾಯಂ ಮಾಡಿದಂತೆ ಅವರೊಂದಿಗೆ ಕಾರ್ಯನಿರ್ವಹಿಸುತ್ತಿರುವ ಲೋಡರ್ ಗಳು ಮತ್ತು ಚಾಲಕರನ್ನು ಕೂಡ ಕಾಯಂ ಮಾಡಲು ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಸುಮಾರು 1000 ಚಾಲಕರು ಮತ್ತು ಲೋಡರ್ ಗಳು ಇರಬಹುದೆಂದು ಅಂದಾಜಿಸಲಾಗಿದೆ. ಪೌರಕಾರ್ಮಿಕರನ್ನು ಕಾಯಂ ಮಾಡಿದಂತೆ ಅವರೊಂದಿಗೆ ಕಾರ್ಯನಿರ್ವಹಿಸುವ ಚಾಲಕರು, ಲೋಡರ್ ಗಳನ್ನು ಕೂಡ ಕಾಯಂ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...