ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕಿಡಾಗಿರುವ ಡ್ರೋನ್ ಪ್ರತಾಪ್ ಅವರಿಗೆ ಜಾಮೀನು ಸಿಕ್ಕಿ ಎರಡು ದಿನಗಳದಾರೂ ಇನ್ನೂ ಬಿಡುಗಡೆಯಾಗಿಲ್ಲ.
ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ಡ್ರೋನ್ ಪ್ರತಾಪ್ ಅವರಿಗೆ ಮಧುಗಿರಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಮಂಜೂರಾಗಿ ಎರಡು ದಿನ ಕಳೆದರೂ ಡ್ರೋನ್ ಪ್ರತಾಪ್ ಇನ್ನೂ ಜೈಲಿನಿಂದ ಬಿಡುಗಡೆಯಾಗಿಲ್ಲ
ನ್ಯಾಯಾಲಯ ಡ್ರೋನ್ ಪ್ರತಾಪ್ ಗೆ 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಕೇಳಿದೆ. ಜಾಮೀನು ಪ್ರಕ್ರಿಯೆ ಮುಗಿಯದ ಹಿನ್ನೆಲೆಯಲ್ಲಿ ಇನ್ನೂ ಡ್ರೋನ್ ಪ್ರತಾಪ್ ಬಿಡುಗಡೆಯಾಗಿಲ್ಲ ಎಂದು ತಿಳಿದುಬಂದಿದೆ.