ಬೆಂಗಳೂರು : ಮಳೆ ಪ್ರಮಾಣವನ್ನು ಗಮನಿಸಿ ಜುಲೈ 15 ರ ಬಳಿಕ ರಾಜ್ಯದಲ್ಲಿ ಬರಪೀಡಿತ ಗ್ರಾಮಗಳ ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಅವರು, ರಾಜ್ಯದಲ್ಲಿ ನೀರಿನ ಸಮಸ್ಯೆ ತಲೆದೂರಿರುವ ಹಳ್ಳಿಗಳಲ್ಲಿ ಪರಿಹಾರ ಕ್ರಮ ಕೈಗೊಳ್ಳಲು 1 ಕೋಟಿ ರೂ. ಅನುದಾನ ನೀಡಲಾಗಿದೆ. ಜುಲೈ 15 ರ ಬಳಿಕ ಬರ ಗ್ರಾಮಗಳ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ಮುಂದಿನ 10 ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕರ್ನಾಟಕದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವ ಸಾಧ್ಯತೆ ಇದೆ. ಜುಲೈ 15 ರವರೆಗೆ ಮಳೆಯ ಪ್ರಮಾಣ ಗಮನಿಸಿ ನಂತರ ಬರಪೀಡಿತ ಗ್ರಾಮಗಳ ಘೋಷಣೆಮಾಡಲಾಗುವುದು ಎಂದು ಹೇಳಿದ್ದಾರೆ.