ಮೈಸೂರು : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕುಡಿಯುವ ನೀರು ಹಾಗೂ ಮೇವಿನ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 216 ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. 42,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಅಗತ್ಯ ಬಿದ್ದರೇ ಹೊಸದಾಗಿ ಬೋರ್ವೆಲ್ ಕೊರೆಸಲು ಸೂಚಿಸಲಾಗಿದೆ.ಜಾನುವಾರಗಳಿಗೆ ಮೇವು ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ.ರೈತರಿಗೆ ನಿರಂತರ ಐದು ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.