
ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಮುಳುಗು ತಜ್ಞ ಗಾಯಗೊಂಡಿದ್ದಾರೆ.
ಕಲ್ಲು ಬಡಿದು ಮುಳುಗು ತಜ್ಞ ದೀಪು ಎದೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಗಾಯಾಳು ದೀಪು ಅವರನ್ನು ಅಂಕೋಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಂಗಾವಳಿ ನದಿಯಲ್ಲಿ ಮುಳುಗಿರುವ ಟ್ರಕ್ ಮೇಲೆ ತರಲು ಪ್ರಯತ್ನ ನಡೆಸಲಾಗಿತ್ತು. ಮಲ್ಪೆಯಿಂದ ಆಗಮಿಸಿರುವ ಈಶ್ವರ ಮಲ್ಪೆ ಅವರ ಎಂಟು ಜನರ ತಂಡ ಕಾರ್ಯಾಚರಣೆ ನಡೆಸಿದ್ದು, ಈ ತಂಡದಲ್ಲಿದ್ದ ದೀಪು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.