ಡ್ರಗ್ಸ್ ಸಾಗಿಸುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ ಅಶಿಶ್ ಆಯಿಲ್ ಮತ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ
ಆರೋಪಿಗಳು ಈಶಾನ್ಯ ಪ್ರಾಂಟಿಯಾರ್ ರೈಲ್ವೆ ಅಗರ್ತಲಾ ಕೋಚಿಂಗ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಎಸಿ ಪರಿಚಾರಕರು ಹಾಗೂ ಬೆಡ್ರೋಲ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಆರೋಪಿಗಳು ಅಶಿಶ್ ಎಣ್ಣೆ ಮತ್ತು ಗಾಂಜಾವನ್ನು ಉತ್ತರ ಪ್ರದೇಶದ ವಿವಿಧ ಪ್ರದೇಶಗಳಿಂದ ಅಗ್ಗದ ಬೆಲೆಗೆ ಖರೀದಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ರೈಲಿನಲ್ಲಿ ತಮಗೆ ನೀಡಲಾದ ಲಾಕರ್ಗಳಲ್ಲಿ ಇವುಗಳನ್ನು ಸಾಗಿಸುತ್ತಿದ್ದರು.
ಈ ಬಗ್ಗೆ ಸುಳಿವು ಪಡೆದಿದ್ದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಈ ಜಾಲದಲ್ಲಿದ್ದ ಇನ್ನಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.