
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ.
ಶಿರಸಿಯ ಶಾಂತಿನಗರದ ವಿನಾಯಕ(39), ಗಣೇಶನಗರದ ನಿಖಿಲ್(26), ಭಟ್ಕಳ ಮೂಲದ ಸಮಿ ಅಬ್ಬಾಸ್(40) ಗಾಂಜಾ ಮಾರಾಟ ಮಾಡುವಾಗ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ 1.25 ಲಕ್ಷ ರೂಪಾಯಿ ಮೌಲ್ಯದ 4.76 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.