
ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಅಬ್ದುಲ್ ಜಲೀಲ್ ಬಂಧಿತ ಆರೋಪಿ. ಈತ ಮಂಗಳೂರಿನ ಕಸಬಾ ಬೆಂಗರೆ ನಿವಾಸಿ. ಬೆಂಗಳೂರಿನಿಂದ ಮಂಗಳೂರಿಗೆ ಎಂಡಿಎಂಎ ತೆಗೆದುಕೊಂಡು ಹೋಗಿದ್ದ ಆರೋಪಿ, ಆಟೋದಲ್ಲಿ ಸಾಗಾಟ ಮಾಡುತ್ತಿದ್ದ. ಮಂಗಳೂರಿನಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ.
ಆಟೋದಲ್ಲಿ ಎಂಡಿಎಂಎ ಸಾಗಾಅಟ ಮಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆಟೋ ಸಮೇತ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 75 ಗ್ರಾಂ ಎಂಡಿಎಂಎ, ಆಟೋ ಹಾಗೂ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಐಷಾರಾಮಿ ಜೀವನಕ್ಕಾಗಿ ಜಲೀಲ್ ಡ್ರಗ್ಸ್ ದಂಧೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.