ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ದಿ. ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಜೈಲು ಪಾಲಾಗಿದ್ದಾರೆ.
ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಜಡ್ಜ್ ಎದುರು ಹಾಜರುಪಡಿಸಲಾಗಿದ್ದು, ಕೋರ್ಟ್ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಅನಾರೋಗ್ಯದಿಂದ ಬಳಲುತ್ತಿರುವ ಆದಿತ್ಯಗೆ ಜೈಲಿನಲ್ಲಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಕೋರ್ಟ್ ಆದೇಶಿಸಿದೆ. ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ 6 ನೇ ಆರೋಪಿಯಾಗಿದ್ದು, ಹಲವು ತಿಂಗಳಿಂದ ತಲೆಮರೆಸಿಕೊಂಡಿದ್ದರು. ಕಳೆದ ವಾರ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಚೆನ್ನೈನಲ್ಲಿ ಬಂಧಿಸಿದ್ದರು.