ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ಮನೆಗಳ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ.
ಸೋನಿಯಾ ಅಗರವಾಲ್, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆನ್ನಲಾಗಿದೆ. ಗೋವಿಂದಪುರ ಠಾಣೆ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ರಾಜಾಜಿನಗರ, ಪದ್ಮನಾಭನಗರ, ಬೆನ್ಸನ್ ಟೌನ್ ಸೇರಿದಂತೆ ಹಲವೆಡೆ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.