ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿರುವ ಪೊಲೀಸರು, 22 ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ಬೆನ್ನಲ್ಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ಪೊಲೀಸರು, 26 ದಿನಗಳಲ್ಲಿ 40 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಇದೀಗ 22 ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಿದ್ದು, ಬೆಂಗಳೂರಿನಿಂದ ಎಂಡಿಎಂಎ ಡ್ರಗ್ ಖರೀದಿಸಿ ತರುತ್ತಿದ್ದರು. ಬಳಿಕ ಕರಾವಳಿ ಜಿಲ್ಲೆಗಳಲ್ಲಿ, ಕೇರಳದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ 22 ಆರೊಪಿಗಳನ್ನು ಬಂಧಿಸಿರುವ ಪೊಲೀಸರು, ಕಿಂಗ್ ಪಿನ್ ಪತ್ತೆಗಾಗಿ ಬಲೆ ಬೀಸಿದ್ದಾರೆ.