ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ಮೇಲೆ ದಾಳಿ ಮಾಡಲಾಗಿದೆ.
ಡ್ರಗ್ಸ್ ಸೇವನೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದು, ಉತ್ತರ ಭಾರತ ಮೂಲದ ಮೂವರು ಯುವತಿಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡಾರ್ಕ್ ವೆಬ್ ಮೂಲಕ ಡ್ರಗ್ಸ್ ತರಿಸಿಕೊಂಡಿರುವ ಮಾಹಿತಿ ಗೊತ್ತಾಗಿದೆ.
ಎಂಬಿಎ ಮಾಡಿ ಖಾಸಗಿ ಕಂಪನಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದಾಳೆ. ಡ್ರಗ್ ಡೀಲ್ ಶಂಕೆ ಹಿನ್ನೆಲೆ ಹೆಚ್ಚಿನ ತನಿಖೆಗಾಗಿ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಎನ್.ಸಿ.ಬಿ. ಅಧಿಕಾರಿಗಳು ಮೂವರು ಯುವತಿಯರ ವಿಚಾರಣೆ ನಡೆಸಿದ್ದಾರೆ.