alex Certify BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಸ್ಟಾರ್ ರಾಹುಲ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದ ರಾಹುಲ್ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಇಂದು ಬೆಳಗ್ಗೆ 4.30 ರ ಸುಮಾರಿಗೆ ಕೋಣನಕುಂಟೆಯ ನಾರಾಯಣ ನಗರದಲ್ಲಿ ರಾಹುಲ್ ಇರುವ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ ತೆರಳಿದ್ದಾರೆ. ಈ ವೇಳೆ ರಾಹುಲ್ ಡ್ರ್ಯಾಗರ್ ನಿಂದ ಹಲ್ಲೆಗೆ ಮುಂದಾಗಿದ್ದು, ಹನುಮಂತನಗರ ಠಾಣೆ ಪಿಎಸ್ಐ ಬಸವರಾಜ ಪಾಟೀಲ್ ಮತ್ತು ಪೊಲೀಸ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪಿಎಸ್ಐ ಫೈರಿಂಗ್ ಮಾಡಿದ್ದಾರೆ. ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಹುಲ್ 19 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ದಕ್ಷಿಣ ವಿಭಾಗದ ಅನೇಕ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ವಾರೆಂಟ್ ಕೂಡ ಜಾರಿಯಾಗಿದೆ. ಬಂಧನದ ವೇಳೆ ಪೊಲೀಸ್ ಕಾನ್ಸ್ ಟೇಬಲ್ ನಿಂಗಪ್ಪರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದೆ. ರಾಹುಲ್ ಡ್ರಗ್ಸ್ ದಂಧೆಯಲ್ಲಿಯೂ ಭಾಗಿಯಾಗಿದ್ದನೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...