ಬೆಂಗಳೂರು : ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ ಪೊಲೀಸರು ನೈಜೀರಿಯನ್ ಪ್ರಜೆಯನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಆರ್ ಟಿ ನಗರ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿದ್ದುಕೊಂಡೇ ಅಕ್ರಮವಾಗಿ ಡ್ರಗ್ಸ್ ಸರಬರಾಜು ಮಾಡ್ತಿದ್ದ ನೈಜೀರಿಯನ್ ಪ್ರಜೆ ಜಾನ್ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದಾನೆ. ಮನೆಯಲ್ಲಿದ್ದ ಸಿಲಿಂಡರ್ ತಳದಲ್ಲೇ ಡ್ರಗ್ಸ್ ಸ್ಟೋರೇಜ್ ಮಾಡಿದ್ದ ಕಿಲಾಡಿ, ಕಚ್ಚಾ ವಸ್ತುವಿನಿಂದ ಕ್ಲಾಸಿ ಡ್ರಗ್ಸ್ ತಯಾರಿಸಿ ಮಾರಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಗೋವಾ ಹಾಗೂ ಮಹಾರಾಷ್ಟ್ರದ ಕಡೆಯಿಂದ ಶುದ್ಧ ಕಚ್ಛಾ ವಸ್ತುಗಳನ್ನ ತರಿಸಿಕೊಂಡು ಡ್ರಗ್ಸ್ ತಯಾರು ಮಾಡ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಪೈಪ್ ಮೂಲಕ ಮಹಡಿಯಿಂದ ಇಳಿದು ಎಸ್ಕೇಪ್ ಆಗಲು ಯತ್ನಿಸಿದ್ದ ಆರೋಪಿ ಜಾನ್ ನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ವಿವಿ ಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.