ಬೆಂಗಳೂರು: ಡ್ರಂಕ್ & ಡ್ರೈವ್ ಪ್ರಕರಣಕ್ಕೆ ಸಂಬಧಿಸಿದಂತೆ ಒಂದೇ ದಿನದಲ್ಲಿ ಬೆಂಗಳೂರು ಪೊಲೀಸರು 201 ಚಾಲಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಕುಡಿದು ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದು, ಅದರಲ್ಲಿ ವೀಕೆಂಡ್ ದಿನಗಳಲ್ಲಿ ಇಂತಹ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರು ನಗರದಾದ್ಯಂತ ಕಾರ್ಯಾಚರಣೆ ಕೈಗೊಂಡಿರುವ ಸಂಚಾರಿ ಪೊಲೀಸರು, ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಚೆಕ್ ಪೋಸ್ಟ್ ಗಳಲ್ಲಿಯೂ ತಪಾಸಣೆ ನಡೆಸಲಾಗುತ್ತಿದೆ.
ಬೆಂಗಳೂರು ದಕ್ಷಿಣ ವಿಭಾಗದಲ್ಲಿ 9,615 ವಾಹನಗಳನ್ನು ತಪಾಸಣೆ ನಡೆಸಲಾಗಿದ್ದು, ಒಂದೇ ದಿನ 201 ಡ್ರಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಒಟ್ಟು 34,676 ವಾಹನಗಳನ್ನು ತಪಾಸಣೆ ನಡೆಸಲಾಗಿದ್ದು, ಈವರೆಗೆ 779 ಪ್ರಕರಣ ದಾಖಲಿಸಲಾಗಿದೆ. ಕೋರಮಂಗಲದಲ್ಲಿ ಅತಿ ಹೆಚ್ಚು ಅಂದರೆ 41 ಕೇಸ್ ದಾಖಲಾಗಿದೆ ಎಂದು ಸಂಚಾರಿ ವಿಭಾಗದ ಪೊಲೀಸರು ತಿಳಿಸಿದ್ದಾರೆ.