ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದ್ದ 23 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ಸಂಚಾರಿ ವಿಭಾಗದ ಪೊಲೀಸರು, ಎಲ್ಲಾ ಶಾಲಾ ವಾಹನಗಳನ್ನು ತಡೆದು ತಪಾಸಣೆ ನಡೆಸಿದ್ದು, ಈ ವೇಳೆ 23 ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಕುಡಿದ ಮತ್ತಿನಲ್ಲಿ ಶಾಲಾ ವಾಹನ ಚಲಾಯಿಸುತ್ತಿದ್ದ ಚಾಲಕರ ಲೈಸನ್ಸ್ ರದ್ದುಗೊಳಿಸುವಂತೆ ಆರ್ ಟಿಒ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾರ್ಯಾಚರಣೆಯ ವೇಳೆ ಫಿಟ್ನೆಸ್ ಸರ್ಟಿಫಿಕೆಟ್ ಇಲ್ಲದ 11 ವಾಹನಗಳು ಪತ್ತೆಯಾಗಿದ್ದು, ಇವುಗಳ ವಿರುದ್ಧ ಶಾಲಾ ಆಡಳಿತ ಮಂಡಳಿಗೂ ನೋಟಿಸ್ ನೀಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.