
ಗುಜರಾತಿನ ಭರೂಚ್‌ನ ಆರ್.ಕೆ. ಸಿನಿಮಾಸ್‌ನಲ್ಲಿ ವಿಕಿ ಕೌಶಲ್ ಅಭಿನಯದ ‘ಛಾವಾ’ ಚಿತ್ರ ಪ್ರದರ್ಶನದ ವೇಳೆ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ರಂಪಾಟ ನಡೆಸಿದ್ದಾನೆ. ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನ ಕುರಿತ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ದೃಶ್ಯವೊಂದರ ಕುರಿತು ತೀವ್ರ ಭಾವೋದ್ವೇಗಕ್ಕೆ ಒಳಗಾದ ಈತ, ಸಿನಿಮಾ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ.
ಆರೋಪಿ ಜಯೇಶ್ ವಾಸವಾ ಪರದೆಯನ್ನು ಹರಿದು, ಬೆಂಕಿ ನಂದಿಸುವ ಸಾಧನ ಬಳಸಿ ಹಾನಿ ಮಾಡಿದ್ದಾನೆ. ಈ ಘಟನೆಯಿಂದ ಪ್ರೇಕ್ಷಕರು ಭಯಭೀತರಾಗಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಕ್ಷ್ಮಣ್ ಉಟೇಕರ್ ನಿರ್ದೇಶನದ ಮತ್ತು ದಿನೇಶ್ ವಿಜನ್ ಅವರ ಮ್ಯಾಡಾಕ್ ಫಿಲ್ಮ್ಸ್ ಅಡಿಯಲ್ಲಿ ನಿರ್ಮಿಸಿರುವ, ಛಾವಾ ಒಂದು ಐತಿಹಾಸಿಕ ಕಥಾ ಹಂದರ ಹೊಂದಿರುವ ಚಿತ್ರವಾಗಿದ್ದು, ಛತ್ರಪತಿ ಶಿವಾಜಿ ಮಹಾರಾಜರ ಮಗ ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನದ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ, ವಿಕ್ಕಿ ಕೌಶಲ್ ಮರಾಠಾ ಸಾಮ್ರಾಜ್ಯದ ಸಂಸ್ಥಾಪಕನ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ, ಅಕ್ಷಯ್ ಖನ್ನಾ, ಅಶುತೋಷ್ ರಾಣಾ ಮತ್ತು ದಿವ್ಯಾ ದತ್ತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
View this post on Instagram