ಸಾಹಿತಿ ಡಿ.ಎಸ್. ನಾಗಭೂಷಣ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ‘ಗಾಂಧಿ ಕಥನ’ ಆತ್ಮಕಥೆಗೆ ಡಿ.ಎಸ್. ನಾಗಭೂಷಣ್ ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ.
2021 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಿಸಲಾಗಿದ್ದು, ಸಾಹಿತಿ ಡಿ.ಎಸ್. ನಾಗಭೂಷಣ್ ಅವರ ‘ಗಾಂಧಿ ಕಥನ’ ಆತ್ಮಕಥೆಗೆ ಪ್ರಶಸ್ತಿ ಲಭಿಸಿದೆ.
ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರಿನ ತಿಮ್ಮಸಂದ್ರದಲ್ಲಿ ಜನಿಸಿದರು. ಆಕಾಶವಾಣಿ ಕೇಂದ್ರದಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ಹಲವಾರು ಕೃತಿಗಳನ್ನು ರಚಿಸಿದ್ದಾರೆ.
ಇಂದಿಗೆ ಬೇಕಾದ ಗಾಂಧಿ, ಲೋಹಿಯಾ ಜೊತೆಯಲ್ಲಿ, ರೂಪ ರೂಪಗಳನು ಧಾಟಿ, ಕುವೆಂಪು ಒಂದು ಪುನರನ್ವೇಷಣೆ, ಕುವೆಂಪು ಸಾಹಿತ್ಯ ದರ್ಶನ, ಜಯಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ, ನಮ್ಮ ಶಾಮಣ್ಣ, ಕನ್ನಡದ ಮನಸು ಮತ್ತು ಇತರ ಲೇಖನಗಳು ಮೊದಲಾದ ಕೃತಿ ರಚಿಸಿದ್ದಾರೆ.