ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ ನಡೆದ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಮುಂದುವರೆಸಿದೆ.
ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಡಿ.ಎಸ್. ವೀರಯ್ಯ ಅವರ ಬ್ಯಾಂಕ್ ಖಾತೆಗೆ ಗುತ್ತಿಗೆದಾರರಿಂದ 3 ಕೋಟಿ ರೂಪಾಯಿ ಸಂದಾಯವಾಗಿರುವುದಕ್ಕೆ ಪುರಾವೆ ದೊರೆತಿದೆ. 2023ರ ಸೆಪ್ಟೆಂಬರ್ 23ರಂದು ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
ಬಂಧಿತ ಆರೋಪಿಗಳಾಗಿರುವ ವೀರಯ್ಯ ಮತ್ತು ಮಾಜಿ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅವರು ಅಕ್ರಮ ನಡೆಸಿದ್ದು, ಕೆಲವು ಮಹತ್ವದ ಸಾಕ್ಷ್ಯಗಳು ಸಿಐಡಿಗೆ ದೊರೆತಿವೆ. ಅಕ್ರಮದಿಂದ ಬಂದ ಹಣದಲ್ಲಿ ವೀರಯ್ಯ ಅವರು ಕೆಂಗೇರಿ ವ್ಯಾಪ್ತಿಯ ಉಲ್ಲಾಳದಲ್ಲಿ ಒಂದು ನಿವೇಶನ ಖರೀದಿಸಿದ್ದಾರೆ ಎಂದು ಹೇಳಲಾಗಿದೆ.