ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರಿ ಮಳೆ ಮತ್ತು ಕೆಟ್ಟ ಹವಾಮಾನದ ಕಾರಣ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ನಾಲ್ಕು ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.
ತಿರುಚಿರಾಪಳ್ಳಿಯಿಂದ ಮಂಗಳೂರಿಗೆ ಮತ್ತೊಂದು ವಿಮಾನವನ್ನು ಸಹ ರದ್ದುಗೊಳಿಸಲಾಗಿದ್ದು, ಇಲ್ಲಿಂದ ಜೆಡ್ಡಾಕ್ಕೆ ತೆರಳುವ ವಿಮಾನ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಯ ಪ್ರಕಾರ, ರದ್ದುಗೊಳಿಸಲಾದ ವಿಮಾನಗಳು ಏರ್ ಇಂಡಿಯಾ ಎಕ್ಸ್‌ಪ್ರೆಸ್.
ದುಬೈನಿಂದ ಮಂಗಳೂರಿಗೆ ವಿಮಾನ ಸಂಖ್ಯೆ 814, ಮಂಗಳೂರಿನಿಂದ ದುಬೈಗೆ 813, ದುಬೈನಿಂದ ಮಂಗಳೂರಿಗೆ 384 ಮತ್ತು ಮಂಗಳೂರಿನಿಂದ ದುಬೈಗೆ ವಿಮಾನ ಸಂಖ್ಯೆ 383 ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಸಂಜೆ ಮಂಗಳೂರಿನಿಂದ ಜಿದ್ದಾಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಖ್ಯೆ 797 ಇನ್ನೂ ವಿಳಂಬವಾಗಿದೆ. ಮತ್ತೊಂದೆಡೆ, ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಖ್ಯೆ 814 ಅನ್ನು ಗುರುವಾರವೂ ರದ್ದುಗೊಳಿಸಲಾಗಿದೆ.
ಅಂತೆಯೇ, ಗುರುವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಖ್ಯೆ 796 ಜೆಡ್ಡಾದಿಂದ ಮಂಗಳೂರಿಗೆ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಖ್ಯೆ 1498 ಮಂಗಳೂರಿನಿಂದ ತಿರುಚಿರಾಪಳ್ಳಿಗೆ ವಿಳಂಬವಾಗಲಿದೆ.
ಏಪ್ರಿಲ್ 15 ರ ಮಧ್ಯರಾತ್ರಿಯಿಂದ, ದುಬೈನ ಅನೇಕ ಸ್ಥಳಗಳಲ್ಲಿ ಭಾರೀ ನೀರು ನಿಂತಿದ್ದು, ನಿಯಮಿತ ಚಟುವಟಿಕೆಗಳು ಮತ್ತು ವಿಮಾನ ಪ್ರಯಾಣವನ್ನು ಅಡ್ಡಿಪಡಿಸಿದೆ. ದುಬೈನಲ್ಲಿ ಮಂಗಳವಾರ (ಏಪ್ರಿಲ್ 16) ಕೇವಲ 12 ಗಂಟೆಗಳಲ್ಲಿ ದಾಖಲೆಯ 100 ಮಿಮೀ ಮಳೆ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.
ಮರುಭೂಮಿ ರಾಷ್ಟ್ರದಾದ್ಯಂತ ದಾಖಲೆಯ ಮಳೆ
ಮರುಭೂಮಿ ರಾಷ್ಟ್ರವಾದ ಯುನೈಟೆಡ್ ಅರಬ್ ಎಮಿರೇಟ್ಸ್ ಬುಧವಾರ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಹ ಉಂಟಾಗಿದೆ. ದಾಖಲೆಯ ಭಾರೀ ಮಳೆಯಿಂದ ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣದ ಮೂಲಕ ತೆರಳುವ ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದೆ.