ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಆಹ್ವಾನ ಪತ್ರಿಕೆ ಕೂಡ ಸಿದ್ಧಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಂದೇಶ ಎಲ್ಲರ ಗಮನ ಸೆಳೆಯುತ್ತಿದೆ.
ಇಡೀ ಪ್ರಪಂಚವನ್ನು ಕಾಡಿದ್ದ ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಕಳೆದ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸಾಂಪ್ರದಾಯಿಕವಾಗಿ, ಚಾಮುಂಡಿಬೆಟ್ಟ ಹಾಗೂ ಅರಮನೆ ಆವರಣದಲ್ಲಿ ಸೀಮಿತ ಜನರಿಗೆ ಅವಕಾಶ ನೀಡಿ ಆಚರಿಸಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ ದಸರಾ ಆಚರಿಸೋಣ. ಜೀವನದೊಂದಿಗೆ ಜೀವವೂ ಮುಖ್ಯವೆಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ತಾವೆಲ್ಲರೂ ಸ್ವಾಗತಿಸುತ್ತೀರಿ ಎಂಬ ಸದಾಶಯವಿದೆ.
ಆಗಾಗ ಗ್ಯಾಸ್ಟ್ರಿಕ್ ನಿಂದ ಢರ್, ಪೊರ್ ಶಬ್ಧ ಬರ್ತಿದೆಯಾ….? ಎಚ್ಚರ….!
ಅಕ್ಟೋಬರ್ 7ರಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಅ.15ರಂದು ಜಂಬೂಸವಾರಿ ನಡೆಯಲಿದ್ದು, ಸಂಜೆ 4:30ರಿದ 5:30ರ ಶುಭ ಮೀನ ಲಗ್ನದಲ್ಲಿ ಪೂಜೆ ನಡೆಯಲಿದೆ ಎಂದು ತಿಳಿಸಿದ್ದಾರೆ.