alex Certify ‘IPL’ ಪಂದ್ಯದ ವೇಳೆ ನುಗ್ಗಿದ ನಾಯಿಯನ್ನು ಬೆನ್ನಟ್ಟಿ ಒದ್ದ ಸಿಬ್ಬಂದಿಗಳು, ಪ್ರಾಣಿ ಪ್ರಿಯರ ಆಕ್ರೋಶ |Video Viral | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘IPL’ ಪಂದ್ಯದ ವೇಳೆ ನುಗ್ಗಿದ ನಾಯಿಯನ್ನು ಬೆನ್ನಟ್ಟಿ ಒದ್ದ ಸಿಬ್ಬಂದಿಗಳು, ಪ್ರಾಣಿ ಪ್ರಿಯರ ಆಕ್ರೋಶ |Video Viral

ಐಪಿಎಲ್ ಪಂದ್ಯದ ವೇಳೆ ಆಕಸ್ಮಿಕವಾಗಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರವೇಶಿಸಿದ ನಾಯಿಯನ್ನು ಒದ್ದು ಅಮಾನವೀಯವಾಗಿ ವರ್ತಿಸಿದ ಸಿಬ್ಬಂದಿಗಳ ವರ್ತನೆಗೆ ಪ್ರಾಣಿ ಪ್ರಿಯರು ಖಂಡನೆ ವ್ಯಕ್ತಪಡಿಸಿದ್ದಾರೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ವೇಳೆ ಈ ಘಟನೆ ನಡೆದಿದೆ.

ಐಪಿಎಲ್ ಪಂದ್ಯದ ವೇಳೆ ಆಕಸ್ಮಿಕವಾಗಿ ಕ್ರಿಕೆಟ್ ಕ್ರೀಡಾಂಗಣಕ್ಕೆ ನಾಯಿಯೊಂದು ಪ್ರವೇಶಿಸಿದೆ. ಭದ್ರತಾ ಸಿಬ್ಬಂದಿಗಳನ್ನು ನಾಯಿಯನ್ನು ಕಾಲಿನಿಂದ ಒದೆಯುತ್ತಾ ಕ್ರೀಡಾಂಗಣದಲ್ಲಿ ಬೆರೆಸಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪ್ರಾಣಿ ಹಕ್ಕುಗಳ ಕಾರ್ಯಕರ್ತರಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ.ಮುಗ್ಧ ನಾಯಿಯ ಮೇಲೆ ಕ್ರೌರ್ಯ ಎಸಗಿದ್ದು ದುರಂತ, ಇದರಲ್ಲಿ ಭಾಗಿಯಾಗಿರುವವರನ್ನು ಬಂಧಿಸಿ ದಂಡ ವಿಧಿಸಬೇಕು ಎಂದು ಆಗ್ರಹಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...