ಬೆಂಗಳೂರು : ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಪರೇಡ್ ವೇಳೆ ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ವ್ಯಕ್ತಿಯೋರ್ವ ನುಗ್ಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರು ಮೂಲದ ಪರಶುರಾಮ್ ಎಂಬುವವರು ಸಿಎಂ ಬಳಿ ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
KPSC ಆರ್ಡರ್ ವಿಳಂಬದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲು ಬಂದಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡದೇ ಇದ್ದರಿಂದ ಪರಶುರಾಮ್ ಸಿಎಂ ಬಳಿ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.