ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು ಎಂದು ಬಿಜೆಪಿ ಟ್ವಿಟರ್ ನಲ್ಲಿ ವಾಗ್ಧಾಳಿ ನಡೆಸಿದೆ.
Troll Minister ಪ್ರಿಯಾಂಕ್ ಖರ್ಗೆ ಅವರ ಉಸ್ತುವಾರಿ ಅವಧಿಯಲ್ಲಿ ಕಲ್ಬುರ್ಗಿಯಲ್ಲಿ ಕೇವಲ ಕೊಲೆ-ಸುಲಿಗೆಗಳದ್ದೇ ದರ್ಬಾರು. ಪ್ರಿಯಾಂಕ್ ಉಸ್ತುವಾರಿ ಸಚಿವರಾದ ಈ 10 ತಿಂಗಳಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಸಾಲು ಸಾಲಾಗಿ ಹತ್ಯೆಗೀಡಾಗುತ್ತಿದ್ದಾರೆ. ಇದಕ್ಕೆ ಕಲ್ಬುರ್ಗಿಯನ್ನು ತಮ್ಮ ಪುಂಡ ಪೋಕರಿ ಪಟಾಲಂಗೆ ಒಪ್ಪಿಸಿರುವ ಸಚಿವ ಪ್ರಿಯಾಂಕ್ ಖರ್ಗೆಯವರೇ ನೇರ ಹೊಣೆ. ಮಹಾಂತಪ್ಪ ಆಲೂರೆಯವರ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ಮುಖಂಡ ಗಿರೀಶ್ ಚಕ್ರರವರನ್ನು ಸಹ ಹತ್ಯೆಗೈಯಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಕಲ್ಬುರ್ಗಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣ ಹಳ್ಳ ಹಿಡಿಸಿರುವ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಮೊದಲು ಸಂಪುಟದಿಂದ ವಜಾ ಮಾಡಿ ಎಂದು ಎಂದು ಬಿಜೆಪಿ ಟ್ವಿಟರ್ ನಲ್ಲಿ ವಾಗ್ಧಾಳಿ ನಡೆಸಿದೆ.