alex Certify BIG NEWS : ರಾಜ್ಯ ಸರ್ಕಾರಿ ನೌಕರರಿಗೆ ‘ದಸರಾ ಗಿಫ್ಟ್’ : DA ಶೇ.3.75 ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ‘ದಸರಾ ಗಿಫ್ಟ್’ : DA ಶೇ.3.75 ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ಸಿಕ್ಕಿದ್ದು, ‘ತುಟ್ಟಿಭತ್ಯೆ’ ಶೇ.35ರಿಂದ ಶೇ.38.75ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಹೌದು. ರಾಜ್ಯದ ಸರ್ಕಾರಿ ನೌಕರರಿಗೆ ‘ದಸರಾ ಹೊತ್ತಲ್ಲೇ ಬಂಪರ್ ಗಿಫ್ಟ್’ ಸಿಕ್ಕಿದ್ದು, ಡಿಎ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡ 3.75 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದೊಂದಿಗೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇಕಡ 38.75ಕ್ಕೆ ಏರಿಕೆಯಾಗಿದೆ. ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಡಿಎ ಹೆಚ್ಚಳದ ಪ್ರಯೋಜನ ಸಿಗಲಿದೆ. ಯುಜಿಸಿ, ಎಐಸಿಟಿಇ ಶ್ರೇಣಿಗಳ ಬೋಧಕ ಸಿಬ್ಬಂದಿಗೆ ಶೇಕಡ 4ರಷ್ಟು ಡಿಎ ಹೆಚ್ಚಳ ಮಾಡಲಾಗಿದೆ.ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 1109 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ ಎಂದು ಹೇಳಲಾಗಿದೆ.

ಏನಿದೆ ಆದೇಶದಲ್ಲಿ..?

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 35 ರಿಂದ ಶೇಕಡ 38.75 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರ, ಆ ಸ್ಥಗಿತ ವೇತನ ಬಡ್ತಿ,
(ಅ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,

(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.

3. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

L. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2023 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 35 ರಿಂದ ಶೇಕಡ 38.75 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.

5. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.

6. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ಚರ್ಾ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...