ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹು ನಿರೀಕ್ಷಿತ ‘ಕೃಷ್ಣಂ ಪ್ರಣಯಸಖಿ’ ಚಿತ್ರ ನಿನ್ನೆಯಷ್ಟೇ ತೆರೆ ಕಂಡಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದ ‘ದ್ವಾಪರ’ ಹಾಡು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದ್ದು, ಯೂಟ್ಯೂಬ್ ನಲ್ಲಿ 20 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಜಸ್ಕರನ್ ಸಿಂಗ್ ಈ ಹಾಡಿಗೆ ಧ್ವನಿಯಾಗಿದ್ದು, ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.
ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಜೋಡಿಯಾಗಿ ಮಾಳ್ವಿಕಾ ನಾಯರ್ ಮತ್ತು ಶರಣ್ಯ ಶೆಟ್ಟಿ ಅಭಿನಯಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ವೆಂಕಟರಾಮ್ಪ್ರಸಾದ್ ಛಾಯಾಗ್ರಹಣ ಹಾಗೂ ವಿಜಯ್ ಈಶ್ವರ್ ಸಂಭಾಷಣೆ ಬರೆದಿದ್ದಾರೆ.