ಕಲಬುರಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಡಿವೈಎಸ್ಪಿಯನ್ನು ವಶಕ್ಕೆ ಪಡೆಯಲಾಗಿದೆ.
ಅಭ್ಯರ್ಥಿಗಳು ಮತ್ತು ಕಿಂಗ್ ಪಿನ್ ಗಳಿಗೆ ನೆರವಾದ ಆರೋಪದ ಮೇಲೆ KSRP ಡಿವೈಎಸ್ಪಿ ವೈಜನಾಥ್ ಅವರನ್ನು ಸಿಐಡಿ ಕಸ್ಟಡಿಗೆ ಪಡೆದುಕೊಂಡಿದೆ. ಕಲಬುರಗಿಯಲ್ಲಿ ಸಿಐಡಿ ಅಧಿಕಾರಿಗಳು ಕೆಎಸ್ಆರ್ಪಿ ಡಿವೈಎಸ್ಪಿ ವೈಜನಾಥ ಅವರ ವಿಚಾರಣೆ ನಡೆಸಿದ್ದಾರೆ. ಇದರೊಂದಿಗೆ ಪಿಎಸ್ಐ ಅಕ್ರಮ ಕೇಸ್ ನಲ್ಲಿ ಇಬ್ಬರು ಡಿವೈಎಸ್ಪಿಗಳನ್ನು ವಶಕ್ಕೆ ಪಡೆದುಕೊಂಡಂತಾಗಿದೆ.
ವೈಜನಾಥ್ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಅಭ್ಯರ್ಥಿಗಳು, ಕಿಂಗ್ ಪಿಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ.